ನಾವು ಸಂದ್ಯಾವಂದನೆ ಮಾಡುವುದೇಕೆ?
ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸೂರ್ಯ ಉದಯಿಸುವಾಗ ಮತ್ತು ಮುಳುಗುವಾಗ ಪ್ರಪಂಚಕ್ಕೆಲ್ಲ ಬೆಳಕನ್ನು ಕೊಡುವ ಸೂರ್ಯನಿಗೆ ಕೃತಜ್ಞತೆ ಹೇಳುವ ಉದ್ದೇಶದಿಂದ ಮಾಡುವ ಕಾರ್ಯವೇ “ಸಂಧ್ಯಾವಂದನೆ”.ಸಂಧ್ಯಾವಂದನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ,ಶಾಂತಿ ದೊರಕುತ್ತದೆ.ಆರೋಗ್ಯ ದೃಷ್ಟಿಯಿಂದ ಪ್ರಾಣಾಯಾಮ ಮಾಡಿದರೆ ಮನಸ್ಸು ಶುದ್ಧವಾಗಿ ಬುದ್ಧಿ ಚುರುಕಾಗುತ್ತದೆಆಯಸ್ಸು ಹೆಚ್ಚುತ್ತದೆ.ಋಷಿವರೇಣ್ಯರ ದೀರ್ಘಾಯುಷ್ಯದ ಗುಟ್ಟು ಈ “ಪ್ರಾಣಾಯಾಮ”. ಹಾಗೆ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ಎಲ್ಲ ಅಂಗಾಂಗಗಳಿಗೂ ವ್ಯಾಯಾಮ ಆಗುತ್ತದೆ.
ಸೂರ್ಯನ ಕಿರಣಗಳಲ್ಲಿನ “ಡಿ” ಅನ್ನಾಂಗಗಳು ನಮ್ಮ ದೇಹವನ್ನು ಸೇರುತ್ತವೆ.ಅಷ್ಟೆ ಅಲ್ಲದೆ ನಮ್ಮ ಜೀವನದಲ್ಲಿ ಶಿಸ್ತು ಮೂಡಲು ಪ್ರಥಮ ಮೆಟ್ಟಿಲು ಸಂಧ್ಯಾವಂದನೆ ಆಗಿದೆ.
ನಾವು ಧ್ಯಾನವನ್ನೇಕೆ ಮಾಡ ಬೇಕು?
ಧ್ಯಾನ ಎಂದರೆ ಏಕಾಗ್ರತೆ. ನಮ್ಮ ಮನಸ್ಸು ಚಂಚಲವಾಗಿರುತ್ತದೆ. ಈ ಚಂಚಲತೆಯನ್ನು ಹೋಗಲಾಡಿಸಿ ಮನಸ್ಸನ್ನು ಧೃಡವಾಗಿರಿಸುವ ಪ್ರಕ್ರಿಯೆಯೇ “ಧ್ಯಾನ”. ದೃಢವಾದ ಮನಸ್ಸಿನಿಂದ ಸರಿಯಾದ ನಿರ್ಣಯಗಳನ್ನು ತೆಗೆದು ಕೊಳ್ಳ ಬಹುದು.
ಹಾಗೆ ಸರಿಯಾದ ನಿರ್ಣಯಗಳಿಂದ ತೆಗೆದು ಕೊಂಡ ನಿರ್ಧಾರವು ತಪ್ಪಾಗಲಿಕ್ಕೆ ಸಾಧ್ಯವಿಲ್ಲ.ಯಾವುದೇ ಕಾರ್ಯಗಳನ್ನು ಏಕಾಗ್ರತೆಯಿಂದ ಮಾಡುವವನಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ. ಮನಸ್ಸಿನ ಸಂಕಟಗಳು ದೂರವಾಗುತ್ತದೆ. ಮನಸ್ಸನ್ನು ಉಲ್ಲಾಸದಾಯಕವಾಗಿ ಇಡುವ ಈ ಧ್ಯಾನವನ್ನು ಮೂಢ ನಂಬಿಕೆಯೆಂದು ದೂರ ಮಾಡಿದರೆ, ಬಹಳ ದೊಡ್ಡ ಪ್ರಮಾಣದ ನಷ್ಟವೆಂದರೆ ಅತಿಶಯೋಕ್ತಿಯಲ್ಲ.
ನಾವು ದೇವರಿಗೆ ದೀಪವನ್ನು ಹಚ್ಚುವುದು ಏಕೆ?
ಭಗವಂತನು ಜ್ಯೋತಿ ಸ್ವರೂಪನಾಗಿದ್ದಾನೆ. ಆತನಿಗೆ ಜ್ಯೋತಿಗಳಿಂದ ಉಪಯೊಗವೇನು? ಅಂದರೆ ನಾವು ಬೆಳಗುವ ದೀಪಗಳು ಪರಮಾತ್ಮನಿಗಲ್ಲ. ಆತನಿಂದ ಜ್ಞಾನವೆಂಬ ಬೆಳಕು ಅಂಧಕಾರದ ನಮ್ಮ ಬಾಳಿನಲ್ಲಿ ಹರಡಲಿ ಎಂಬ ಭಾವನೆಯನ್ನಿಟ್ಟು ಕೊಂಡು ದೀಪವನ್ನು ಬೆಳಗುತ್ತೇವೆ.ಹಾಗೆಂದು ವಿದ್ಯುದ್ದೀಪಗಳನ್ನು ಹಚ್ಚುತ್ತೇವೆಂದರೆ ನಿಮ್ಮ ಅಂದಾಜು ತಪ್ಪು ಎನ್ನುತ್ತೇನೆ. ಏಕೆಂದರೆ, ದೀಪಗಳನ್ನು ತುಪ್ಪ ಅಥವ ಎಣ್ಣೆ ಮತ್ತು ಬತ್ತಿಗಳಿಂದ ಹಚ್ಚುತ್ತೇವೆ.
ತುಪ್ಪದ ದೀಪದ ಬೆಳಕು ಕಣ್ಣಿನ ಆರೋಗ್ಯವನ್ನು ವೃಧ್ದಿಸುತ್ತದೆ.ಬೆಳಕು ದೃಷ್ಠಿಯನ್ನು ಮಂದವಾಗಿಸುತ್ತದೆ.ಎಣ್ಣೆಯ ದೀಪಕ್ಕಿಂತ ತುಪ್ಪದ ದೀಪವು ಅಧಿಕ ಆಮ್ಲಜನಕ ಬಿಡುಗಡೆ ಮಾಡುವುದರಿಂದ ಶ್ರೇಷ್ಟ ಎಂದಿದ್ದಾರೆ.ಅಂತೆಯೇ ನಂದಾ ದೀಪವನ್ನು ಹಚ್ಚುವುದೇಕೆಂದರೆ,ಹಿಂದಿನ ಕಾಲದಲ್ಲಿ ಅಂದರೆ ರಂಜಕದಿಂದ ಬೆಂಕಿಯ ಉಪಯೋಗವು ತಿಳಿಯುವುದಕ್ಕೆ ಮುಂಚೆ ಎರಡು ಬೆಣಚು ಕಲ್ಲುಗಳ ಘರ್ಷಣೆಯಿಂದ ಅಥವಾ ಅರುಣಿಗಳಿಂದ ಬೆಂಕಿಯನ್ನು ಉತ್ಪಾದಿಸುತ್ತಿದ್ದರು.ಇವುಗಳಿಂದ ಬೆಂಕಿಯನ್ನು ಉತ್ಪಾದಿಸುವುದು ಬಹಳ ಕಷ್ಟಕರವಾದ ಮತ್ತು ರೇಜಿಗೆಯ ಕೆಲಸವಾಗಿತ್ತು.ಒಮ್ಮೆ ಹೊತ್ತಿಸಿದ ಬೆಂಕಿಯನ್ನು ದೀರ್ಘ ಕಾಲದವರೆಗೆ ಉಪಯೋಗಿಸುವ ಉದ್ದೇಶವಿಟ್ಟು ಕೊಂಡು ನಂದಾದೀಪವನ್ನು ಹಚ್ಚುವ ಪರಿಪಾಠವನ್ನು ರೂಢಿಸಿ ಕೊಂಡು ಬಂದಿರಬೇಕು.

LEAVE A REPLY

Please enter your comment!
Please enter your name here