ಅಳಲೆ ಕಾಯಿಯ ಪುಡಿಯನ್ನು ನೀರಿನೊಂದಿಗೆ ಬೆರೆಸಿ,ಬಾಯಿ ಮುಕ್ಕಳಿಸಿ ಉಗುಳುವುದರಿಂದ ಬಾಯಿಹುಣ್ಣು ಮತ್ತಿತರ ವಸಡು ದೋಷಗಳಿಗೆ ರಾಮಬಾಣ.

ಜೀರ್ಣಶಕ್ತಿಯನ್ನು ವರ್ಧಿಸಲು ಮಲಬದ್ಧತೆಯನ್ನು ನೀಗಿಸುವಲ್ಲಿ ಪರಿಣಾಮಕಾರಿಯಾಗಿದೆ.ಎಲ್ಲಾ ಪ್ರಕಾರದ ಕಣ್ಣುಗಳ ಬೇನೆಗೂ,ಅಳಲೆ ಕಾಯಿ ಉಪಯೋಗಕಾರಿಯಾಗಿದೆ.

ಪ್ರತಿದಿನ ಮುಂಜಾನೆ ಅಳಲೆ ಕಾಯಿ ಕಷಾಯವನ್ನು ಕುಡಿಯುವುದರಿಂದ ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡುವುದರ ಜೊತೆಗೆ, ದೇಹದಲ್ಲಿ ಶೇಖರಿಸಲ್ಪಟ್ಟ ಅನಗತ್ಯ ಕೊಬ್ಬನ್ನು ಕರಗಿಸುತ್ತದೆ.ಲೈಂಗಿಕ ತೊಂದರೆ ಹಾಗೂ ನರದೌರ್ಬಲ್ಯಕ್ಕೆ ಮದ್ದು.

ಗರ್ಭಿಣಿಯರು ಅಳಲೆ ಕಾಯಿಯನ್ನು ಸೇವಿಸುವಂತಿಲ್ಲ. ಏಕೆಂದರೆ, ಇದರ ಸೇವೆಯಿಂದ ಗರ್ಭಪಾತದ ಸಾಧ್ಯತೆಗಳು ಹೆಚ್ಚೆಂದು ಹಿರಿಯರು ಅಭಿಪ್ರಾಯಪಡುತ್ತಾರೆ.

ಕಣ್ಣು ಕೆಂಪಾಗುವುದು ಹಾಗೂ ಕಣ್ಣಿನಲ್ಲಿ ನೀರು ಸುರಿಯುವುದು ಚೆನ್ನಾಗಿ ಬಲಿತಿರುವ ಹಾಗೂ ದಪ್ಪವಾದ ಅಳಲೆ ಕಾಯನ್ನು ಶುದ್ಧವಾದ ನೀರಿನಲ್ಲಿ ತೇದು ಗಂಧವನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣು ಕೆಂಪಾಗುವುದು ಹಾಗೂ ಕಣ್ಣಿನಲ್ಲಿ ನೀರು ಸುರಿಯುವುದು ಕಡಿಮೆಯಾಗುತ್ತದೆ.

ಚಿತ್ರಮೂಲ,ಶುಂಠಿ, ಅಳಲೆಕಾಯಿ ಸಿಪ್ಪೆ ಈ ಮೂರು ವಸ್ತುಗಳನ್ನು ಕ್ರಮವಾಗಿ 10-10 ಗ್ರಾಂ ತೆಗೆದುಕೊಂಡು ನುಣ್ಣಗೆ ಕುಟ್ಟಿ ಪುಡಿಮಾಡಿ ಶೇಖರಿಸುವುದು. 10 ಗ್ರಾಂ ಚೂರ್ಣವನ್ನು ನೀರಿಗೆ ಹಾಕಿ ಕಷಾಯ ಮಾಡಿ 2 ಗ್ರಾಂ ಯವಕ್ಷಾರವನ್ನು ಸೇರಿಸಿ ಸೇವಿಸುವುದರಿಂದಾಗಿ ಮೂಲದ ಮೊಳೆಗಳು ನಿಧಾನವಾಗಿ ಕರಗಿ ಹೋಗುವುದು ಮತ್ತು ರಕ್ತಸ್ರಾವ, ಉರಿ ಶಮನವಾಗುವುದು.

ತ್ರಿಫಲ ಚೂರ್ಣ, ಶುಂಠಿ, ದನಿಯ ಮತ್ತು ವಾಯು ವಿಳಂಗಗಳ ಸಮತೂಕದ ಚೂರ್ಣ ಮಾಡುವುದು. ಇದರಲ್ಲಿ 20 ಗ್ರಾಂ ಚೂರ್ಣವನ್ನು ನೀರಿಗೆ ಹಾಕಿ ಕಷಾಯವನ್ನು ಅರ್ಧಭಾಗ ಕೆಳಗಿಳಿಸಿ ತಣ್ಣಗಾದ ಮೇಲೆ ದಿವಸಕ್ಕೆ ಎರಡುಬಾರಿ ಸೇವಿಸುವುದು.ತಲೆನೋವು ಶಮನವಾಗುವುದು.

LEAVE A REPLY

Please enter your comment!
Please enter your name here