ಹೆಸರಿಗೆ ತಕ್ಕಂತೆ ಅಮೃತ ಈ ಬಳ್ಳಿ…ಯಾವುದದು? ಓದಿ ಇದನ್ನು

0
774

ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ. ಬಳ್ಳಿಯ ಮೇಲೆ ಬೀಸಿ ಬರುವ ಗಾಳಿ ಅಮೃತ ಸಮಾನವಾದುದು ಮತ್ತು ಬಳ್ಳಿಯಡಿಯಲ್ಲಿ ನಿಲ್ಲುವ ಅಥವಾ ಸಾಗುವ ಮನುಷ್ಯ, ಎತ್ತಿನಗಾಡಿ, ಪಶುಪಕ್ಷಿಗಳು ಮತ್ತು ಈಗಿನ ಆಧುನಿಕ ವಾಹನಗಳು ಅಪಘಾತಗಳಿಂದ ಸುರಕ್ಷಿತವಾಗಿರುವವು ಎನ್ನುವ ನಂಬಿಕೆಯಿದೆ.

ಇದರ ಔಷದೀಯ ಉಪಯೋಗಗಳೇನು ಗೊತ್ತೇ ಓದಿ..

ಇದು ತ್ರಿದೋಷಗಳಿಂದ (ಅಂದರೆ ವಾತ, ಪಿತ್ತ, ಕಫ) ಉಂಟಾದ ತೊಂದರೆಗಳನ್ನು ನಿವಾರಿಸುತ್ತದೆ. ಎಲ್ಲ ಬಗೆಯ ಜ್ವರಗಳಿಗೂ ಅಮೃತ ಬಳ್ಳಿ ಪರಿಣಾಮಕಾರಿ ಔಷಧಿ.ಅಮೃತ ಬಳ್ಳಿಯ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆ (ಆಹಾರ ಸೇವನೆಗೆ ಮುಂಚೆ) ಸೇವಿಸಬೇಕು.

ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಧೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು.ಸಂಬಾರ ಬಳ್ಳಿ,ಅಮೃತ ಬಳ್ಳಿ ಎಲೆ, ಮಜ್ಜಿಗೆ ಹಾಗೂ ತುಳಸಿ ಲವಂಗ ತುಳಸಿ,ಅರಸಿನ ಪುಡಿ,ಕಾಳುಮೆಣಸು,ಜೀರಿಗೆ,ಶುಂಠಿ ಇದರ ಐದಾರು ಎಲೆಗಳನ್ನು ಪ್ರತಿನಿತ್ಯ ಸೇವಿಸಬಹುದು.ಎಲೆಯು ಸ್ವಲ್ಪ ಕಹಿ ಮತ್ತು ಒಗರಿನಿಂದ ಕೂಡಿದೆ. ಎಲೆ ಮತ್ತು ಕಾಂಡದಿಂದ ತಂಬುಳಿ ತಯಾರಿಸಬಹುದು.ಎಲೆ ಮತ್ತು ಕಾಂಡವನ್ನು ಜೀರಿಗೆಯೊಂದಿಗೆ ನುಣ್ಣಗೆ ಅರಿಯಬೇಕು.

ಅದಕ್ಕೆ ಮಜ್ಜಿಗೆ ಸೇರಿಸಿ ಸಾಸಿವೆ ಒಗ್ಗರಣೆ ಕೊಟ್ಟರೆ ತಂಬುಳಿ ತಯಾರು. ಬಳ್ಳಿಯ ಮೇಲೆ ಬೀಸಿ ಬರುವ ಗಾಳಿಯು ಆರೋಗ್ಯಕ್ಕೆ ಹಿತಕಾರಿ ಮತ್ತು ಮನೆಗೆ ತಂಪು.

LEAVE A REPLY

Please enter your comment!
Please enter your name here